ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ ಶುಕ್ರವಾರ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನದಂದು ಶಿವಮೊಗ್ಗ ಫ್ರೀಡಂ ಪಾರ್ಕ್‍ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವನಿಧಿ ಯೋಜನೆ ಉದ್ಘಾಟನೆ: ಬಸ್ ವ್ಯತ್ಯಯ
ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಜ.12ರಂದು ಕೆಎ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿರುತ್ತದೆ.
ಗುರುವಾರ ಬಸ್‍ಗಳ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.