ಮಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು.
ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೊರ್ಟರ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರನಗದು ವರ್ಗಾವಣೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಲು ತಿಂಗಳ 25ನೇ ತಾರೀಖಿನೊಳಗೆ ತಾನು ನಿರುದ್ಯೋಗಿ , ವ್ಯಾಸಾಂಗ ಮುಂದುವರಿಸುತ್ತಿ ಹಾಗೂ ಸ್ವಯಂ ಉದ್ಯೋಗಿ ಅಲ್ಲ ಎ೦ದು ಸ್ವಯಂ ಘೋಷಣೆಯನ್ನು ಮಾಡಬೇಕು. ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳ ಸ್ವಯಂ ದೃಢೀಕರಣ ಮಾಡಿಕೊಳ್ಳದಿರುವ ಫಲಾನುಭವಿಗಳಿಗೆ ಜೂನ್ 25 ರವರೆಗೆ ಅವಕಾಶವಿದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್‍ಸೈಟ್ https://sevasindhugs.karnataka.gov.in ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.