17.5 C
Karnataka
Friday, November 22, 2024

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ ರೂ. 3000, ಡಿಪ್ಲೊಮಾ – ರೂ.1500

ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.
ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ ರೂ. 1500 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಇದು ಲಭ್ಯ. ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳವರೆಗೆ ವಾಸಿಸಿ, ಪದವಿ ಅಥವಾ ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದು. ಆರು ವರ್ಷಗಳ ವಾಸವಿರುವುದನ್ನು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ.

  • ಎಸ್ ಎಸ್ ಎಲ್ ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ಅಂಕಪಟ್ಟಿಗಳು ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಡಿಪ್ಲೋಮಾಪ್ರಮಾಣ ಪತ್ರ ಅಥವಾ ಅಂಕಪಟ್ಟಿ.
  • ಸಾಮಾನ್ಯ ಪ್ರವೇಶ ಪರೀಕ್ಷೆ, ಸಿಇಟಿ ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣ ಪತ್ರ ಅಥವಾ ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ.
  • ಎನ್.ಐ.ಒ.ಎಸ್ ( ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ) ನೀಡಿದ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಸಹ ವಾಸಸ್ಥಳ ಪರಿಶೀಲನೆಗಾಗಿ ಪರಿಗಣಿಸುವುದು.
  • ಅಭ್ಯರ್ಥಿಯ ಪದವಿ ಡಿಪೆÇ್ಲೀಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು ನ್ಯಾಷನಲ್ ಅಕಾಡೆಮಿ ಡಿಪೊಸಿಟ್ರೀ(ಓಂಆ) ಅಲ್ಲಿ ಅಪ್ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ ಡಿಪೆÇ್ಲೀಮಾ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ ಡಿಪೆÇ್ಲೀಮಾ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು.
  • ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳುವ ಮೊದಲು ಡಿಜಿ ಲಾಕರ್ ನಲ್ಲಿ ಡಿ ಜಿ ಲೋಕಲ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ ನ್ಯಾಷನಲ್ ಅಕಾಡಮಿಕ್ ಡಿಪೊಸಿಟ್ರೀ ಪ್ರಮಾಣ ಪತ್ರವನ್ನು ಪಡೆದಿರುವುದು ಖಚಿತಪಡಿಸಿಕೊಳ್ಳುತಕ್ಕದ್ದು.
    2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಲಭಿಸಿದವರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವರಿಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸುವ ವಿಧಾನ.

  • ಸೇವಾ ಸಿಂಧು ಜಾಲತಾಣ sevasindhugs.karnataka. gov.inನಲ್ಲಿ ಲಾಗಿನ್ ಆಗಿ ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು ಡಿಬಿಟಿ ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು.
  • ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು, ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
  • ಅಭ್ಯರ್ಥಿಗಳು ಅರ್ಜಿ ಹಾಕುವಾಗ ತಾವು ಉತ್ತೀರ್ಣರಾದ ದಿನದಂದು ಆರು ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆ ವಹಿವಾಟು ಸ್ಟೇಟ್‍ಮೆಂಟ್ ಪ್ರತಿ ನೀಡಬೇಕು.
  • ಪದವಿ, ಡಿಪ್ಲೋಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗುವುದಿಲ್ಲ.
    ಅರ್ಜಿ ಸಲ್ಲಿಸಲು ಮತದಾರರ ಗುರುತಿನ ಚೀಟಿ ಪದವಿ ಪ್ರಮಾಣ ಪತ್ರ ಡಿಪ್ಲೋಮಾ ಹೊಂದಿದ್ದರೆ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ನೀಡಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಮತ್ತು ಅದರ ಮಾಹಿತಿ ಅಗತ್ಯವಿದೆ. ಯಾವುದೇ ಅಪ್ರೆಂಟಿಸ್ ತರಭೇತಿಯನ್ನು ವೇತನದೊಂದಿಗೆ ಪಡೆಯುತ್ತಿರುವವರು, ಸರ್ಕಾರಿ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವರು, ಸರ್ಕಾರದ ನಾನಾ ಯೋಜನೆಗಳ ಅಡಿ ಬ್ಯಾಂಕ್ ಸಾಲ ಪಡೆದು ಸ್ವಉದ್ಯೋಗ ಆರಂಭಿಸಿದವರು ಈ ಯೋಜನೆಗೆ ಅರ್ಹರಾಗುವುದಿಲ್ಲ.
  • ಡಿಸೆಂಬರ್ 8ಮತ್ತು 9ರಂದು ಜಿಲ್ಲೆಯ ಎಲ್ಲಾ ಕಾಲೇಜು ಮತ್ತು ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಯುವನಿಧಿ ನೋಂದಣಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles